ರಾಯಚೂರು: ಎಕ್ಸಾಂ ಡ್ಯೂಟಿ ಮುಗಿಸಿ ಬರುತ್ತಿದ್ದ ಪಿಯು ಉಪನ್ಯಾಸಕರೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ನಡೆದಿದೆ.
59 ವರ್ಷದ ಮಾನಪ್ಪ ಗೋಪಳಾಪುರ ಹತ್ಯೆಯಾದ ದುರ್ದೈವಿ. ದೇವದುರ್ಗದ ಪಿಯು ಮಹಿಳಾ ಕಾಲೇಜು ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು.
ಪರೀಕ್ಷಾ ಡ್ಯೂಟಿ ಮುಗಿಸಿ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಅಡ್ಡಗಟ್ಟಿ ತಲೆ ಮೇಲೆ ಕಲ್ಲು ಎತ್ತಿಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.