ತುಮಕೂರು: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರನಲ್ಲಿದ್ದ ಶಿಕ್ಷಕ ದಂಪತಿಯ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮಲ್ಲಸಂದ್ರ ಬಳಿ ನಡೆದಿದೆ.
ಈಶ್ವರಪ್ಪ(52), ಕಲ್ಪನಾ (48)ಮೃತ ದುರ್ದೈವಿಗಳು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಇಬ್ಬರು ಗುಬ್ಬಿಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೆಗ್ಗೆರೆಯಿಂದ ಗುಬ್ಬಿಗೆ ತೆರಳುವಾಗ ಘಟನೆ ಸಂಭವಿಸಿದೆ.