ಶಿವಮೊಗ್ಗ: ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ಅವರ ಬೆಂಬಲಿಗರು ಆಕ್ರೋಶಗೊಂಡಿದ್ದು,ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು ಟೈರ್’ಗೆ ಬೆಂಕಿ ಹಚ್ಚಿ ತಮ್ಮ ನೋವು ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಫೋಟೊಗಳಿಗೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಗೋಪಿ ಸರ್ಕಲ್’ನಲ್ಲಿ ಟೈರ್’ಗೆ ಬೆಂಕಿ ಹಚ್ಚಿದ ಬಿಜೆಪಿ ಕಾರ್ಯಕರ್ತರು ಮತ್ತು ಈಶ್ವರಪ್ಪ ಬೆಂಬಲಿಗರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಈಶ್ವರಪ್ಪ ಅವರ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ವಿನಾಕಾರಣ ಅವರನ್ನು ಆರೋಪಿಯನ್ನಾಗಿ ಮಾಡಿ ಸಚಿವ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಲಾಗಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.